ಗೃಹ ಸಚಿವ ಬೊಮ್ಮಾಯಿ ರಾಜಿನಾಮೆಗೆ ಎಸ್.ಡಿ.ಪಿ.ಐ ಆಗ್ರಹ

Update: 2020-01-24 18:08 GMT

ಭಟ್ಕಳ: ಮಂಗಳುರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಂಡು ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು ಮತ್ತು ಒಬ್ಬ ಭಯೋತ್ಪಾದಕನನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ ಗೃಹಸಚಿವ ಬಸವರಾಜ ಬೊಮ್ಮಾಯಿ ಕೂಡಲೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು. 

ಶಂಕಿತ ಉಗ್ರ ಆದಿತ್ಯ ರಾವ್ ನನ್ನು ಮಾನಸಿಕ ಅಸ್ವಸ್ಥನೆಂದು ಹೇಳುವ ಮೂಲಕ ಈ ರಾಜ್ಯದ ಗೃಹ ಸಚಿವರು ಓರ್ವ ಆರೋಪಿ, ಭಯೋತ್ಪಾದಕನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದೆ. ಅಲ್ಲದೆ ಇಡೀ ಮುಸ್ಲಿಮ್ ಸಮುದಾಯವನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿರುವ ಮಾಧ್ಯಮಗಳ ವಿರುದ್ಧವೂ ಕಠಿಣ ಕ್ರಮ ಜರಗಿಸಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದೆ.

ಈ ಸಂದರ್ಭ ಎಸ್.ಡಿ.ಪಿಐ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ತೌಸಿಫ್ ಬ್ಯಾರಿ, ಭಟ್ಕಳ ತಾಲೂಕಾಧ್ಯಕ್ಷ ವಸೀಮ್ ಮನೆಗಾರ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News