ನಜ್ಮಾ ಎಂ.ಪೀರಜಾದೆ ಅವರಿಗೆ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

Update: 2020-01-24 18:37 GMT

ಬೆಳಗಾವಿ, ಜ.24: ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.

ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅದೇ ರೀತಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ವಿವಿಧ ಜನಪರ ಯೋಜನೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮೀಣ ಜನರ ಹಾಗೂ ವಿಶೇಷವಾಗಿ ರೈತ ಸಮುದಾಯದ ಮೆಚ್ಚುಗೆಗೆ ಪಾತ್ರರಾಗಿದ್ದರು. ಇವರ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ನೀಡುವಂತೆ ಭೂಮಾಪನ ಇಲಾಖೆಯ ಆಯುಕ್ತರು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು.

ಪೀರಜಾದೆ ಅವರ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಸರಕಾರ ನೀಡಿದೆ. ಪ್ರಶಸ್ತಿಯು 25 ಸಾವಿರ ರೂ. ಪ್ರೋತ್ಸಾಹ ಧನ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News