ತುಂಬು ಗರ್ಭಿಣಿಗೆ ಹಾವು ಕಡಿತ: ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
Update: 2020-01-25 18:56 IST
ಮಡಿಕೇರಿ, ಜ.25: ಕೊಳಕು ಮಂಡಲ ಹಾವೊಂದು ಕಚ್ಚಿದ ಪರಿಣಾಮ ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಶಾಜಿ ಅವರ ಪತ್ನಿ ಸುಚಿತಾ ಅವರಿಗೆ ಶುಕ್ರವಾರ ರಾತ್ರಿ ಹಾವು ಕಚ್ಚಿದ್ದು, ತಕ್ಷಣ ಅವರನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತರಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ತುಂಬು ಗರ್ಭಿಣಿ ಸುಚಿತಾ ಅವರಿಗೆ ಚಿಕಿತ್ಸೆ ಮುಂದುವರೆದಿದೆ.