ಉಡುಪಿ ಜಿಲ್ಲೆಯ 10 ಮಂದಿ ಸರಕಾರಿ ನೌಕರರಿಗೆ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಪ್ರಕಟ

Update: 2020-01-25 15:08 GMT

ಉಡುಪಿ, ಜ.25: ಉಡುಪಿ ಜಿಲ್ಲಾ ಮಟ್ಟದ ಈ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಒಟ್ಟು ಹತ್ತು ಮಂದಿ ರಾಜ್ಯ ಸರಕಾರಿ ನೌಕರರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಎಚ್.ಕೆಂಪೇಗೌಡ, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆ ಗಳ ಉಪನಿರ್ದೇಶಕರಾದ ಬಿ.ಕೆ.ಕುಸುಮಾಧರ್, ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಗಣೇಶ್ ಕೆ., ಉಡುಪಿ ಜಿಪಂ ಸಹಾಯಕ ಯೋಜನಾಧಿಕಾರಿ-2 ಜೇಮ್ಸ್ ಡಿಸಿಲ್ವ, ಜಿಲ್ಲಾಧಿಕಾರಿ ಕಚೇರಿಯ ಅಧೀಕ್ಷಕರಾದ ಕೆ.ರಾಮ ಮೋಹನ್ ಹೆಬ್ಬಾರ್, ಕುಂದಾಪುರ ತಾಲೂಕು ಶಂಕರನಾರಾಯಣದ ಮೆಟ್ರಿಕ್ ಪೂರ್ವ ಬಾಲಕರ ನಿಲಯದ ವಾರ್ಡನ್ ವಿಶ್ವನಾಥ್, ಕಾಪು ಹೋಬಳಿ ಕಂದಾಯ ನಿರೀಕ್ಷಕ ಕೆ.ರವಿಶಂಕರ್, ಬ್ರಹ್ಮಾವರ ತಾಲೂಕು 14ನೇ ಕಾಡೂರು ಗ್ರಾಪಂನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ., ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ಸಹಾಯಕರಾದ ಬಿ.ವಿ.ಶಿವರಾಮ ರಾವ್ ಹಾಗೂ ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮಂಜುನಾಥ ನಾಯ್ಕಾ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾದ ಸರಕಾರಿ ನೌಕರರಾಗಿದ್ದಾರೆ.

ಜ.26ರಂದು ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ದಲ್ಲಿ 2019-20ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News