ಸಾಮಾಜಿಕ ನ್ಯಾಯಕ್ಕಾಗಿ ಪ್ರಾಮಾಣಿಕ ಪ್ರಯತ್ನ: ಡಿಡಿಪಿಐ

Update: 2020-01-25 15:20 GMT

ಮಂಗಳೂರು, ಜ.25 ದ.ಕ. ಜಿಲ್ಲೆಯ ಅನುದಾನಿತ ಪ್ರಾಥಮಿಕ ಶಾಲೆಗಳು,ಶಿಕ್ಷಕರು,ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಿ ಸಾಮಾಜಿಕ ನ್ಯಾಯ ಒದಗಿಸಲಾಗುವುದು ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗಕ್ಕೆ ಭರವಸೆ ನೀಡಿದ ಅವರು ಶಿಕ್ಷಕರ ಹೆಚ್ಚುವರಿಯನ್ನು ಗುರುತಿಸುವಾಗ ಸರಕಾರಿ ಶಾಲೆಗಳಿಗೆ ಇರುವ ಮಾನದಂಡವನ್ನು ಅನುಸರಿಸಲಾಗುವುದು ಎಂದರು.

ಜಿಲ್ಲೆಯಲ್ಲಿರುವ ಶೂನ್ಯ ಶಿಕ್ಷಕ ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ಹೊಂದಾಣಿಕೆ ಮಾಡಬೇಕು ಮತ್ತು ಜನಗಣತಿಯ ಸಂದರ್ಭ ಗಣತಿದಾರರಾದ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಕೆ.ಎಂ.ಕೆ. ಮಂಜನಾಡಿ ಅವರ ನೇತೃತ್ವದ ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಎಂ.ಎಚ್.ಮಲಾರ್, ಮೇರಿ ಡಿಸೋಜ, ಕೋಶಾಧಿಕಾರಿ ಸುಬ್ರಾಯ ಕಾರಂತ, ಸದಸ್ಯರಾದ ವನಜಾ, ವಿಠಲ, ಫಾಝಿಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News