ಬೈಕ್ ಢಿಕ್ಕಿ: ಮಹಿಳೆ ಮೃತ್ಯು

Update: 2020-01-25 16:49 GMT

ಕುಂದಾಪುರ, ಜ.25: ಕುಂಭಾಶಿ ಶ್ರೀಚಂಡಿಕಾ ದುರ್ಗಾಪರಮೇಶ್ವರಿ ದೇವ ಸ್ಥಾನದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.24ರಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

 ಮೃತರನ್ನು ವಿನಯ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕೀರ್ತಿರಾಜ್ ಎಂಬವರ ಬೈಕ್, ರಸ್ತೆ ದಾಟಲು ನಿಂತುಕೊಂಡಿದ್ದ ವಿನಯ ಎಂಬವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ವಿನಯ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಅಪಘಾತದಲ್ಲಿ ಬೈಕ್ ಸವಾರ ಕೂಡ ಗಾಯಗೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News