ಸಂಪುಟ ವಿಸ್ತರಣೆ ಬಗ್ಗೆ ನಾಲ್ಕು ಜನರಿಂದ ತೀರ್ಮಾನ: ಗೋವಿಂದ ಕಾರಜೋಳ

Update: 2020-01-25 18:01 GMT

ಬಾಗಲಕೋಟೆ, ಜ.25: ಯಾರಿಗೆ ಸಚಿವ ಸ್ಥಾನ ಕೊಡಬೇಕು, ಬಿಡಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಶನಿವಾರ ಇಲ್ಲಿನ ಮುಧೋಳದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ನಡುವೆ ಯಾವುದೇ ಮುಸುಕಿನ ಗುದ್ದಾಟವಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿಯಾಗಿದೆ. ಇನ್ನು, ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಇಲ್ಲ ಎಂಬ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ನುಡಿದರು.

ಪ್ರವಾಹದಿಂದ ಲೋಕೋಪಯೋಗಿ ಇಲಾಖೆಗೆ 3000 ಕೋಟಿ ನಷ್ಟವಾಗಿದೆ. ರಸ್ತೆ, ಸೇತುವೆಗಳ ನಿರ್ಮಾಣಕ್ಕೆ ಮೊದಲ ಕಂತಿನಲ್ಲಿ ಇಲಾಖೆಯಿಂದಲೇ 500 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ, ಕೇಂದ್ರದಿಂದ ಬಿಡುಗಡೆ ಮಾಡಲಾದ ಪರಿಹಾರ ಮೊತ್ತದಲ್ಲಿ ಇಲಾಖೆಗೆ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News