ಕ್ರಿಕೆಟ್ ಬೆಟ್ಟಿಂಗ್: ಓರ್ವನ ಸೆರೆ, 1 ಲಕ್ಷ ರೂ. ನಗದು, ಮೊಬೈಲ್ ಜಪ್ತಿ

Update: 2020-01-25 18:06 GMT

ಬೆಂಗಳೂರು, ಜ.25: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1 ಲಕ್ಷ ರೂ. ನಗದು, ಮೊಬೈಲ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇಲ್ಲಿನ ಚಾಮರಾಜಪೇಟೆಯ ನಿವಾಸಿ ಮದನ್ ರಾಜ್(63) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ರೇಸ್‌ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನ ಕಟ್ಟಡದ ಮುಂಭಾಗ ಸಾರ್ವ ಜನಿಕರ ರಸ್ತೆಯಲ್ಲಿ ವ್ಯಕ್ತಿಯೊಬ್ಬ, ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವೆ ನಡೆಯುತ್ತಿರುವ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಫೋನ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News