ಪುರುಷರು ಮಹಿಳೆಯರೊಂದಿಗೆ ಗೌರವದಿಂದ ನಡೆದುಕೊಳ್ಳಲು ಶಿಕ್ಷಣದ ಅವಶ್ಯಕತೆ ಇದೆ: ರಾಜ್ಯಪಾಲ ವಜುಭಾಯಿ ವಾಲಾ

Update: 2020-01-26 08:31 GMT

ಬೆಂಗಳೂರು, ಜ.26 : 71ನೇ ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಮಾಣಿಕ್‌ ಷಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿದರು.

ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲರು ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು.

ಇದೇ ವೇಳೆ ಮಾತನಾಡಿದ ಅವರು, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಕುರಿತು ಆಂದೋಲನಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸಿಕೊಳ್ಳಬೇಕಾಗಿದೆ’ ಎಂದರು. ‘ಪುರುಷರು ಮಹಿಳೆಯರೊಂದಿಗೆ ಗೌರವದಿಂದ ನಡೆದುಕೊಳ್ಳಲು ಶಿಕ್ಷಣದ ಅವಶ್ಯಕತೆ ಇದೆ’ ಎಂದು ವಜುಭಾಯಿ ವಾಲಾ ತಿಳಿಸಿದರು. 

‘2019 -20 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಲ ಮನ್ನಾ ಯೋಜನೆ ಅಡಿ 21 ಲಕ್ಷ ರೈತರು ಪ್ರಯೋಜನ ಪಡೆದಿದ್ದಾರೆ. ನೆರೆಯಿಂದ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ. ನೀಡಲಾಗಿದೆ ಎಂದರು.  ಬರ ತಡೆಯಲು ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ. ಪೊಲೀಸ್ ವ್ಯವಸ್ಥೆ ಸುಸಜ್ಜಿತವಾಗಿದ್ದು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲಾಗಿದೆ. ಉತ್ತಮ ಆಡಳಿತದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. ಪರಿಸರ ಸಂರಕ್ಷಣೆಗೆ ರಾಜ್ಯ ಸರ್ಕಾರ ಉತ್ತಮ ಯೋಜನೆ ರೂಪಿಸಿದೆ. ಪರಿಸರ ರಕ್ಷಣೆಗೆ ಜನರು ಸರ್ಕಾರದ ಜತೆ ಕೈಜೋಡಿಸಬೇಕು ಎಂದರು.

ಈ ಸಮಾರಂಭದಲ್ಲಿ ಕೆಎಸ್‌ಆರ್‌ಪಿ, ಸ್ಕೌಟ್ಸ್‌-ಗೈಡ್ಸ್‌, ಎನ್‌ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿ ಪಥಸಂಚಲನದಲ್ಲಿ ಭಾಗಿಯಾದರು. ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆ ಮೊಳಗಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News