ಭಟ್ಕಳ: ನ್ಯೂ ಶಮ್ಸ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2020-01-26 11:23 GMT

ಭಟ್ಕಳ: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿ ನ್ಯೂ ಶಮ್ಸ್ ಸ್ಕೂಲ್ ನಲ್ಲಿ ರವಿವಾರ ಜರಗಿದ 71ನೆ ಗಣರಾಜ್ಯೋತ್ಸವ ಅತ್ಯಂತ ಸಡಗರದೊಂದಿಗೆ ನೆರವೇರಿತು. 

ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವೇಝ್ ದ್ವಜಾರೋಹಣ ನೆರವೇರಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಇಂಜಿನಿಯರ್ ನಝೀರ್ ಆಹ್ಮದ್ ಖಾಝಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಓದಿಸುವುದರ ಮೂಲಕ ಸಂವಿಧಾನದ ಗೌರವರವನ್ನು ಎತ್ತಿ ಹಿಡಿಯುವಂತೆ ಮತ್ತು ಸಂವಿಧಾನದ ರಕ್ಷಣೆಗಾಗಿ ಯಾವುದೇ ರೀತಿಯ ತ್ಯಾಗಕ್ಕೆ ಸಿದ್ಧರಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಜಾಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ನ್ಯಾಯಾವಾದಿ ಸೈಯ್ಯದ್ ಇಮ್ರಾನ್ ಲಂಕಾ ಸಂವಿಧಾನದ ಇತಿಹಾಸ ಮತ್ತು ಮಹತ್ವದ ಕುರಿತಂತೆ ಮಾತನಾಡಿದರು. 

ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಸ್ಕೂಲ್ ಬೋರ್ಡ್ ಅಧ್ಯಕ್ಷ ಕಾದಿರ್ ಮೀರಾ ಪಟೇಲ್,  ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ ಅಝೀಝುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಗುಫ್ರಾನ್ ಲಂಕಾ, ಹಬೀಬುಲ್ಲಾ ರುಕ್ನುದ್ದೀನ್, ನಜೀಬ್ ಇಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು. 

ಶಿಕ್ಷಕ ಎಂ.ಆರ್.ಮಾನ್ವಿ ಸ್ವಾಗತಿಸಿದರು. ಸಖ್ಲೈನ್ ಎಸ್.ಎಮ್ ವಂದಿಸಿದರು. ವಿದ್ಯಾರ್ಥಿ ಕು. ಸಯೀಫ್ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News