ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನಗೂ ಇದೆ: ಎಂ.ಬಿ.ಪಾಟೀಲ್

Update: 2020-01-26 11:57 GMT

ವಿಜಯಪುರ, ಜ. 26 : ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ರವಿವಾರ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನಗೂ ಇದೆ. ಆದರೆ, ಪ್ರತಿಪಕ್ಷ ನಾಯಕ ಆಕಾಂಕ್ಷಿ ನಾನಲ್ಲ. ಆ ಸ್ಥಾನ್ಕಕೆ ಸಿದ್ಧರಾಮಯ್ಯನವರೇ ಸೂಕ್ತ ಎಂಬುದು ನಾನೂ ಸೇರಿದಂತೆ ಹಲವು ನಾಯಕರ ಅಭಿಪ್ರಾಯವಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಈಗ ಹೈಕಮಾಂಡ್ ಅಂಗಳದಲ್ಲಿದೆ. ದಕ್ಷಿಣ ಕರ್ನಾಟಕದವರು ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿದ್ದಾರೆ. ಹಾಗಾಗಿ ಉತ್ತರ ಕರ್ನಾಟಕದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದೂ ಎಂ.ಬಿ. ಪಾಟೀಲ ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ್ಕಕೆ ನಾನು ಲಾಬಿ ನಡೆಸಿಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಏನು ಮಾಡಬೇಕು ಎಂಬುದನ್ನು ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಗಮನ್ಕಕೆ ತಂದಿದ್ದೆನೆ ಅಷ್ಟೇ. ಕಾರ್ಯಾಧ್ಯಕ್ಷರ ಸಂಖ್ಯೆ ಹೆಚ್ಚಿಸಬೇಕೆಂಬುದು ಸಿದ್ದರಾಮಯ್ಯ ಅವರ ನಿಲುವಲ್ಲ. ಇದೆಲ್ಲ ಮಾಧ್ಯಮಗಳ ಊಹಾಪೋಹ ಎಂದು ಸ್ಪಷ್ಟನೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂಬುದು ಎಲ್ಲರ ಆಸೆಯಾಗಿದೆ. ಯಾವ ಜಾತಿಯವರಿಗೆ ನೀಡಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ ಪಾಟೀಲ್, ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುವುದಿಲ್ಲ. ತಾನಾಗಿಯೇ ಉರುಳಿದರೆ ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News