ಜ್ಯೋತಿಷ್ಯ ಕ್ಷೇತ್ರದಲ್ಲಿ ಡಾ.ಹರಿಶ್ಚಂದ್ರ ಸಾಲಿಯಾನ್ ಸಾಧನೆ ಅನನ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

Update: 2020-01-26 12:15 GMT

ಮುಲ್ಕಿ: ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಜ್ಯೋತಿಷ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಹರಿಶ್ಚಂದ್ರ ಸಾಲ್ಯಾನ್ ರವರ ಸಾಧನೆ ಅನನ್ಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಜ್ಯೋತಿಷಿ ಡಾ.ಹರಿಶ್ಚಂದ್ರ ಸಾಲ್ಯಾನ್ ರವರಿಗೆ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ "ಜ್ಯೋತಿರ್ಭೂಷಣ"ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸಾಧನೆಗೆ ಸರಕಾರ ಅವರನ್ನು ಗುರುತಿಸಿ ಪ್ರತಿಫಲ ನೀಡಿದೆ ಎಂದು ಹೇಳಿದರು.

ಈ ಸಂದರ್ಭ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ ಭಟ್, ಮಾತೃಶ್ರೀ ಶಾರದಮ್ಮ, ಪೂಜಾ ಸಿ ಭಟ್, ರಾಹುಲ್ ಸಿ ಭಟ್, ಸಂಚಾಲಕರಾದ ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.  

ಅಭಿನಂದನೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಡಾಕ್ಟರ್ ಹರಿಶ್ಚಂದ್ರ ಸಾಲಿಯಾನ್ ಅವರನ್ನು ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಮುಲ್ಕಿ-ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಗೌತಮ್ ಜೈನ್ ಮುಲ್ಕಿ ಅರಮನೆ, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಉದಯಕುಮಾರ್ ಶೆಟ್ಟಿ ಶಿಮಂತೂರು, ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ವಿಶ್ವನಾಥ್ ರಾವ್ ಪುನರೂರು, ಗೋಪಿನಾಥ್ ರಾವ್ ಪುನರೂರು, ಕಿಶೋರ್ ಶೆಟ್ಟಿ ಬಪ್ಪನಾಡು, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಕಾರ್ಯದರ್ಶಿ ವಿನೋದ್ ಸಾಲ್ಯಾನ್, ಕಿಶೋರ್ ಶೆಟ್ಟಿ ದೆಪ್ಪು ನಿಗುತ್ತು, ವಾಮನ ಕೋಟ್ಯಾನ್ ನಡಿಕುದ್ರು, ಸಾಮಾಜಿಕ ಕಾರ್ಯಕರ್ತರಾದ ಪ್ರಾಣೇಶ್ ಹೆಜಮಾಡಿ, ಅಬ್ದುಲ್ ರಝಾಕ್ ಮುಲ್ಕಿ. ಜಯಪಾಲ ಶೆಟ್ಟಿ ಐಕಳ, ಭೀಮಾಶಂಕರ ಆರ್.ಕೆ. ವೀರಯ್ಯ ಹಿರೇಮಠ ಕೆ ಎಸ್ ರಾವ್ ನಗರ ಮತ್ತಿತರರು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News