ಉಪ ಚುನಾವಣೆ: ಮದ್ಯ ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ

Update: 2020-01-26 14:03 GMT

ಕಾರವಾರ: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಈ ಹಿನ್ನೆಲೆ ಜನವರಿ 25 ರಿಂದ ಫೆಬ್ರವರಿ 11, 2020ರವರೆಗೆ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆ ಚುನಾವಣೆಯ ವಿವಿಧ ಪ್ರಕ್ರಿಯೆಗಳು ನಡೆಯಲಿದೆ. 

ಅಲ್ಲದೇ, ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ಪ್ರಕರಣ 308ಎಬಿ ಅನ್ವಯ ಯಾವ ಪಂಚಾಯತ್ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆಯೋ ಆ ಪಂಚಾಯತ್ ಪ್ರದೇಶದ ಒಳಗಿರುವ ಮದ್ಯದ ಅಂಗಡಿಗಳು ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ಅವರು ಆದೇಶ ಹೊರಡಿಸಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಮತ್ತು ಹಳಿಯಾಳ ಸೇರಿದಂತೆ ಆಯಾ ಚುನನಾವಣೆ ನಡೆಯುವ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News