ಮಾನಸಿಕ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ: ನಳಿನ್ ಕುಮಾರ್ ಕಟೀಲ್‌

Update: 2020-01-26 15:22 GMT

ಬೆಂಗಳೂರು, ಜ.26: ಅಧಿಕಾರ ಕಳೆದುಕೊಂಡ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರಕ್ಕೋಸ್ಕರ ಕುಮಾರಸ್ವಾಮಿ ಮನಬಂದಂತೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಅವರು ಈ ರೀತಿಯ ಮಾತುಗಳನ್ನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಸಂಪುಟ ವಿಸ್ತರಣೆಯಂತಹ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ. ಆದರೆ, ಈ ನಡುವೆ ಕಾಂಗ್ರೆಸ್ ಗೊಂದಲವನ್ನು ಸೃಷ್ಟಿಸಲು ಹೊರಟಿದೆ. ಕಾಂಗ್ರೆಸ್‌ಗೆ ನಾವಿಕನೇ ಇಲ್ಲ. ಮೂರು ತಿಂಗಳಾದರೂ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News