ಕೆಎಸ್ಸಾರ್ಟಿಸಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Update: 2020-01-26 16:42 GMT

ಬೆಂಗಳೂರು, ಜ.26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ದ ನೌಕರರ ಸಂಘದ ವತಿಯಿಂದ ಗಣರಾಜ್ಯೋತ್ಸವವನ್ನು ನಿಗಮದ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.

 ರವಿವಾರ ನಿಗಮದ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ನೆರವೇರಿಸಿ, ಕೆಎಸ್ಸಾರ್ಟಿಸಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ 2018-19ನೆ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಕೋರ್ಸ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಸಂಘದ ಸದಸ್ಯರ 1,297ಮಕ್ಕಳಿಗೆ 45ಲಕ್ಷ ರೂ.ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

 ನಿಗಮದ ನೌಕರರು ಮತ್ತು ಅಧಿಕಾರಿಗಳ ಮಕ್ಕಳನ್ನು ಶೈಕ್ಷಣಿಣಕವಾಗಿ ಉತ್ತೇಜಿಸುವ ಸಲುವಾಗಿ ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.70ಕ್ಕಿಂತ ಹೆಚ್ಚು ಮತ್ತು ಪದವಿ/ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನಿಗಮದ ನೌಕರರ ಮತ್ತು ಅಧಿಕಾರಿಗಳ ಮಕ್ಕಳಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News