ಎಸ್.ಡಿ.ಎಂ: ಕಂಗೊಳಿಸಿದ ಗಣರಾಜ್ಯೋತ್ಸವ

Update: 2020-01-26 18:03 GMT

ಬೆಳ್ತಂಗಡಿ: ಉಜಿರೆಯ ಡಿ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಆಯೋಜಿಸಿದ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ  ಸಾಕ್ಷಿಯಾಯಿತು. ಎನ್‍ಸಿಸಿ ತಂಡದ ಆಕರ್ಷಣೀಯ ಪಥಸಂಚಲನ, ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿಯ ಸಾವಿರಾರು ವಿದ್ಯಾರ್ಥಿಗಳ ಶಿಸ್ತುಬದ್ಧವಾಗಿ ಭಾಗವಹಿಸಿದ್ದರು. 

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿಗೇತೆಗಳನ್ನು ಪ್ರಸ್ತುತಪಡಿಸಿದರು. ವಂದೇ ಮಾತರಂ, ಸಾರೇ ಜಹಾಂಸೆ ಅಚ್ಛಾ ಗೀತೆಗಳು ಮೊಳಗಿದವು.

ವಿಜ್ಞಾನಕ್ಕೆ ಸಂಬಂಧಿಸಿದ ಪ್ರಬಂಧ ಬರೆದು ರಾಷ್ಟ್ರೀಯ ಮನ್ನಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಶಂಸೆಗೂ ಪಾತ್ರರಾದ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಸುನೀತಾ ಪ್ರಭು, ನವದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆಯುವ ರಾಷ್ಟ್ರಮಟ್ಟದ ಪರೇಡ್‍ನಲ್ಲಿ ಭಾಗವಹಿಸುವ ಅವಕಾಶ ಪಡೆದ ಎನ್.ಸಿ.ಸಿ. ತಂಡದ ಪ್ರತಿನಿಧಿಗಳನ್ನು ಅಭಿನಂದಿಸಲಾಯಿತು. 

ಧ್ವಜಾರೋಹಣದ ನಿರ್ವಹಣೆಯ ನೇತೃತ್ವ ವಹಿಸಿದ್ದ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ಲೆಫ್ಟಿನೆಂಟ್ ಭಾನುಪ್ರಕಾಶ್, ಎಎನ್‍ಒ ರಮೇಶ್ ಮಯ್ಯ, ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಸ್.ಸತೀಶ್‍ಚಂದ್ರ, ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ದಿನೇಶ್ ಚೌಟ, ಎಸ್.ಡಿ.ಎಂ ಸವಿವಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ, ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ, ಎಸ್.ಡಿ.ಎಂ ಬಿ. ಎಸ್ ಕಾಲೇಜಿನ ಪ್ರಾಂಶುಪಾಲ ಡಾ. ನಿತ್ಯಾನಂದ ಕೆ. ಮತ್ತಿತರರು ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸುನಿಲ್ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News