ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ

Update: 2020-01-27 12:46 GMT

ಕೋಲ್ಕತಾ,ಜ.27:  ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ಣಯವನ್ನು ಪಶ್ಚಿಮ ಬಂಗಾಳ ವಿಧಾನಸಭೆಯು ಸೋಮವಾರ ಅಂಗೀಕರಿಸಿದ್ದು,   ಸಿಎಎ ವಿರುದ್ಧ ನಿರ್ಣಯ ಕೈಗೊಂಡ ನಾಲ್ಕನೇ ರಾಜ್ಯವಾಗಿದೆ ಪಶ್ಚಿಮ ಬಂಗಾಳ. 

ಸಂಸದೀಯ  ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ ಈ ನಿರ್ಣಯವು ಪೌರತ್ವ  ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತದೆ ಮತ್ತು ಎನ್‌ಆರ್‌ಸಿ ಅನುಷ್ಠಾನಗೊಳಿಸುವ ಮತ್ತು ಎನ್‌ಪಿಆರ್ ನವೀಕರಿಸುವ ಯೋಜನೆಗಳನ್ನು ಹಿಂತೆಗೆದುಕೊಳ್ಳಬೇಕು ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸದನದಲ್ಲಿ ಈ ನಿರ್ಣಯವನ್ನು ಮಂಡಿಸಿದರು.

ಕೇರಳ, ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳು ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ  ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News