×
Ad

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನ

Update: 2020-01-27 18:41 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.27: ಕೊಲೆಯತ್ನ, ಮಾರಣಾಂತಿಕ ಹಲ್ಲೆ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಯಲಚೇನಹಳ್ಳಿಯ ರೌಡಿ ಸುಕೇನ್ (25), 10ಕ್ಕೂ ಹೆಚ್ಚು ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಆರೇಳು ಬಾರಿ ಬಂಧಿತನಾಗಿದ್ದರೂ ಜಾಮೀನು ಪಡೆದು ಹೊರ ಬಂದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಬಂಧಿಸಿದ ನಂತರ ಎಚ್ಚರಿಕೆ ಕೊಟ್ಟು ಪ್ರಕರಣ ದಾಖಲಿಸಿ ಕ್ರಮಕೈಗೊಂಡಿದ್ದರೂ ಆತನ ನಡವಳಿಕೆ ಸರಿ ಹೋಗದೆ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದ ಎನ್ನಲಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಟಪ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News