ಹಿರಿಯಡಕ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Update: 2020-01-27 14:58 GMT

ಉಡುಪಿ, ಜ.27: ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್, ಎನ್.ಎಸ್.ಎಸ್., ರೋವರ್ ಮತ್ತು ರೇಂಜರ್ ಘಟಕಗಳು, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ, ಹಾಗೂ ಹಿರಿಯಡ್ಕ ಲಯನ್ಸ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶನಿವಾರ ಏರ್ಪಡಿಸಲಾಗಿತ್ತು.

ಶಿಬಿರವನ್ನು ಜಿಲ್ಲಾ ಲಯನ್ಸ್ ರೀಜನ್ ಚೇರ್‌ಪರ್ಸನ್ ಶೋಭಾ ಎಂ.ಹೆಗ್ಡೆ ರಕ್ತದಾನ ಉದ್ಘಾಟಿಸಿದರು. ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ವೀಣಾಕುಮಾರಿ ಎಂ. ರಕ್ತದಾನದ ಮಹತ್ವ ವಿವರಿಸಿದರು. ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ವಹಿಸಿದ್ದರು.

ಹಿರಿಯಡಕ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮೋಹನ್‌ದಾಸ್ ಸಿ.ಆಚಾರ್ಯ, ಶಿಕ್ಷಣ ಪ್ರೇಮಿ ಸುಂದರ್ ಕಾಂಚನ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸತ್ಯಾನಂದ ನಾಯಕ್, ಹಿರಿಯಡಕ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ರವೀಂದ್ರನಾಥ್ ಹೆಗ್ಡೆ, ಕೋಶಾಧಿಕಾರಿ ಬಾಲಕೃಷ್ಣ ಹೆಗ್ಡೆ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸುಜಯಾ ಕೆ.ಎಸ್. ಮೊದಲಾದವರು ಉಪಸ್ಥಿತರಿದ್ದರು.

ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ.ರಾಘವೇಂದ್ರ ಪಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಎನ್.ಎಸ್.ಎಸ್ ಯೋಜನಾಧಿ ಕಾರಿ ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರೋವರ್ ಸ್ಕೌಟ್ ಲೀಡರ್ ಅನಿಲ್ ಕುಮಾರ್ ಕೆ.ಎಸ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News