ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2020-01-27 15:10 GMT

ಕುಂದಾಪುರ, ಜ.27: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 71ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಮುಖ್ಯ ಸಲಹೆಗಾರ ಹಾಜಿ ಅಬುಶೇಕ್ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವವನ್ನು ತಿಳಿಸಿ ದರು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಅಬ್ದುಲ್ ರಹ್ಮಾನ್ ವಹಿಸಿದ್ದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ದೋಮ ಚಂದ್ರ ಶೇಖರ್, ಪುರಸಭಾ ಸದಸ್ಯ ಅಶ್ಫಾಕ್, ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಶಂಕರ ಪೂಜಾರಿ, ಸಂಜೀವ ಪೂಜಾರಿ, ಕೆ.ಅಬ್ದುಲ್ಲಾ, ತಿಮ್ಮಪ್ಪಖಾರ್ವಿ, ಪ್ರಕಾಶ್ ಕಾಂಚನ್, ನಾಗರಾಜ ಕಾಂಚನ್, ಮುಸ್ತರೀನ್, ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್., ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಬ್ಯಾರೀಸ್ ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಪಿರ್ದೋಸ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಮುಖ್ಯಸ್ಥೆ ಅಶ್ವಿನಿ ಶೆಟ್ಟಿ, ಬ್ಯಾರೀಸ್ ಹಾಜಿ ಕೆ.ಮೊಹಿದ್ದಿನ ಬ್ಯಾರಿ ಅನುದಾನಿತ ಸ್ಮಾರಕ ಪ್ರೌಢ ಶಾಲೆಯ ಮುಖ್ಯಸ್ಥೆ ಜಯಂತಿ, ಬ್ಯಾರೀಸ್ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಸ್ಥೆ  ರೆಹಾನಾ ಬೇಗಂ ಉಪಸ್ಥಿತರಿದ್ದರು.

ಸಹ ಶಿಕ್ಷಕ ಜಯಶೀಲ್ ಶೆಟಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಲ್ಯಾಸ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News