ಮಂಗಳೂರು: ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ

Update: 2020-01-27 15:17 GMT

ಮಂಗಳೂರು, ಜ.27: ನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನಲ್ಲಿ ರವಿವಾರ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನ್ಯಾಯವಾದಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ವಿವೇಕಾನಂದ ಪನಿಯಾಲ, ದೇಶದ ಎಲ್ಲ ಪ್ರಜೆಗಳು ಸಂವಿಧಾನದ ಬಗ್ಗೆ ಅಧ್ಯಯನ ಮಾಡಬೇಕು. ರಾಷ್ಟ್ರದ ನೀತಿ-ನಿಯಮಗಳ ಚೌಕಟ್ಟಿನ ಅರಿವು ನಮಗಿರಬೇಕು ಎಂದರು.

ಶಾಲಾ ವಿದ್ಯಾರ್ಥಿ ಚಿರಂತನಾ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಯಕ್ ವಹಿಸಿದ್ದರು.

ಕಾಲೇಜು ಪ್ರಾಚಾರ್ಯ ಪ್ರಭಾಕರ ಜಿ.ಎಸ್. ಸ್ವಾಗತಿಸಿದರು. ಶಾಲಾ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ವಂದಿಸಿದರು. ಶಿಕ್ಷಕಿ ಸಂಗೀತಾ ಮರೀನಾ ಪೆರಿಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್, ಮಹಾತ್ಮಾ ಗಾಂಧಿ ಹಾಗೂ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News