ಬಯೋಮೆಟ್ರಿಕ್ ಇಲ್ಲದಿದ್ದರೂ ಪಡಿತರ ವಿತರಿಸಿ: ಆಹಾರ ಇಲಾಖೆ ಸುತ್ತೋಲೆ

Update: 2020-01-28 14:27 GMT

ಬೆಂಗಳೂರು, ಜ.28: ಸರ್ವರ್ ಹಾಗೂ ತಂತ್ರಾಂಶ ಸೇರಿದಂತೆ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿ ವರ್ತಕರು ಬಯೋಮೆಟ್ರಿಕ್ ರಹಿತ ಫಲಾನುಭವಿಗಳಿಗೆ ಪಡಿತರ ವಿತರಿಸಬೇಕು ಎಂದು ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ.

ಜ.30ರವರೆಗೆ ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ನ್ಯಾಯಬೆಲೆ ಅಂಗಡಿ ತೆರೆದು ಪಡಿತರ ವಿತರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಕೆಲ ವಿಭಾಗ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣಾ ಪ್ರಮಾಣದಲ್ಲಿ ಶೇ.75 ಕ್ಕಿಂತ ಕಡಿಮೆಯಿದೆ. ಅಂಥವರು ಮ್ಯಾನುವಲ್ ಮೂಲಕವೇ ಪಡಿತರ ವಿತರಿಸಬೇಕು. ಅಲ್ಲದೆ, ಆಯಾ ದಿನ ಪಡಿತರ ವಿತರಿಸಿದ ಮಾಹಿತಿಯನ್ನು ಆಹಾರ ನಿರೀಕ್ಷಕರಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಸಂಗ್ರಹಿತ ಮಾಹಿತಿಯನ್ನು ಮುಖ್ಯ ಕಚೇರಿಗೆ ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ 10 ದಿನ ಯಾವುದೇ ಸಿಬ್ಬಂದಿಗೆ ರಜೆ ಮಂಜೂರು ಮಾಡದಂತೆ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಇಲಾಖೆ ಆಯುಕ್ತೆ ಶಮ್ಲಾ ಇಕ್ಬಾಲ್ ತಿಳಿಸಿದ್ದಾರೆ.

ಸರ್ವರ್ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಆಧಾರ್ ದೃಢೀಕರಣ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಫಲಾನುಭವಿಗಳಿಗೆ ಪಡಿತರ ವಿತರಿಸಿದ ಬಳಿಕ ಫೆ.1 ರಿಂದ ಇ-ಕೆವೈಸಿಗೆ ಮತ್ತೆ ಚಾಲನೆ ನೀಡಲಾಗುವುದು.

-ಶಮ್ಲಾ ಇಕ್ಬಾಲ್, ಆಹಾರ ಇಲಾಖೆ ಆಯುಕ್ತರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News