ಕುಷ್ಠರೋಗ ಮುಕ್ತ ಸಮಾಜಕ್ಕಾಗಿ ‘ಸ್ಪರ್ಶ’ ಜಾಗೃತಿ ಅಭಿಯಾನ

Update: 2020-01-28 16:37 GMT

ಉಡುಪಿ, ಜ.28: ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2020ರ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರೀತಿ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಜಿಪಂ ಕಚೇರಿಯಲ್ಲಿ ಸೋಮವಾರ ನಡೆಯಿತು.

ಕುಷ್ಠ ರೋಗದ ವಿರುದ್ಧ ಅಂತಿಮ ಸಮರ ಸಾರುವ ಧ್ಯೇಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ.30ರಿಂದ ಫೆ.13ರವರೆಗೆ ಸ್ಪರ್ಶ ಕುಷ್ಠ ರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂ ಜ.30ರಂದು ಪ್ರತಿಜ್ಞೆಯನ್ನು ಕೈಗೊಳ್ಳಲಾಗುವುದು.

ಕುಷ್ಠರೋಗದ ಬಗ್ಗೆ ಸಮಾಜದಲ್ಲಿ ಬೇರೂರಿರುವ ತಪ್ಪು ತಿಳುವಳಿಕೆ ಮತ್ತು ಅರಿವಿನ ಕೊರತೆ, ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯ ವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2017ರಿಂದ ಮಹಾತ್ಮಾ ಗಾಂಧೀಜಿ ಹುತಾತ್ಮರಾದ ದಿನವನ್ನು ಕುಷ್ಠರೋಗ ನಿಮೂಲರ್ನಾ ದಿನವನ್ನಾಗಿ ಆಚರಿಸಲಾಗುತ್ತಿದೆ.

ಕುಷ್ಠರೋಗದ ಬಗ್ಗೆ ಸಮಾಜದಲ್ಲಿ ಬೇರೂರಿರುವ ತಪ್ಪು ತಿಳುವಳಿಕೆ ಮತ್ತು ಅರಿವಿನ ಕೊರತೆ, ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯ ವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2017ರಿಂದ ಮಹಾತ್ಮಾ ಗಾಂಧೀಜಿ ಹುತಾತ್ಮರಾದ ದಿನವನ್ನು ಕುಷ್ಠರೋಗ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಕುಷ್ಠರೋಗವನ್ನು ಆರಂಭಿಕ ಹಂತದಲ್ಲೆ ಪತ್ತೆ ಮಾಡಿ, ಸಂಪೂರ್ಣ ಚಿಕಿತ್ಸೆ ನೀಡಿದಲ್ಲಿ ಕುಷ್ಠರೋಗವನ್ನು ಗುಣಪಡಿಸಬಹುದು. ಕುಷ್ಠರೋಗದ ಬಗ್ಗೆ ಇರುವ ಹೆದರಿಕೆಯನ್ನು ದೂರಮಾಡಲು ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಚಿಂಬಾಳ್ಕರ್ ಸಬೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕುಷ್ಠ ರೋಗದ 32 ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಭಾರತವನ್ನು ಕುಷ್ಠರೋಗ ಮುಕ್ತವಾಗಿಸುವುದು ಗಾಂಧೀಜಿ ಕನಸಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಬಾಗಿತ್ವದೊಂದಿಗೆ ಮನೆ ಮನೆಗೆ ತೆರಳಿ ಕುಷ್ಠ ರೋಗದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಳ್ಳಲಿದೆ ಎಂದವರು ವಿವರಿಸಿದರು.

ಜಿಲ್ಲೆಯನ್ನು ಕುಷ್ಠರೋಗ ಮುಕ್ತವನ್ನಾಗಿಸಲು ಎಲ್ಲಾ ಇಲಾಖೆಗಳಿಂದ ಬೇಕಾಗಿರುವ ಸಂಪೂರ್ಣ ಸಹಕಾರವನ್ನು ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಆರ್. ಶೇಷಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾ್ ಹೆಗ್ಡೆ ಮಾರಾಳಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News