ಪೊಕ್ಸೋ ಪ್ರಕರಣ: ಆರೋಪಿ ಬಂಧನ

Update: 2020-01-28 16:41 GMT

ಕೊಲ್ಲೂರು, ಜ.28: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕನೆ ತರಗತಿಯ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕೊಲ್ಲೂರು ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಬಂಧಿತನನ್ನು ಚಿತ್ತೂರಿನ ರಿಕ್ಷಾ ಚಾಲಕ ಸೂರ್ಯನಾರಾಯಣ (22) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಪೊಲೀಸರು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News