ಫೆ.10: ಪರಿಶಿಷ್ಟರ ಮೀಸಲಾತಿ ಹೆಚ್ಚಳ ಕುರಿತು ಸಮಾಲೋಚನಾ ಸಭೆ

Update: 2020-01-28 17:17 GMT

ಮಂಗಳೂರು, ಜ. 28: ರಾಜ್ಯ ಸರಕಾರವು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಸರಕಾರಿ, ಸಾರ್ವಜನಿಕ ಉದ್ಯೋಗಗಳಿಗೆ ಈಗಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕುರಿತು ವರದಿಯನ್ನು ನೀಡುವಂತೆ ಆಯೋಗವನ್ನು ರಚಿಸಲಾಗಿರುತ್ತದೆ.

ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಅಧ್ಯಕ್ಷತೆಯಲ್ಲಿ ಫೆ.10ರಂದು ಬೆಳಗ್ಗೆ 10:30ಕ್ಕೆ ಮೈಸೂರಿನಲ್ಲಿರುವ ಕರ್ನಾಟಕ ಕಲಾ ಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ ಜಿಲ್ಲೆ ಇವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News