551 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2020-01-28 17:45 GMT

ಬೆಂಗಳೂರು, ಜ.28: ವಿಜಯಪುರ, ಧಾರವಾಡ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಮೈಸೂರು, ಉಡುಪಿ ಜಿಲ್ಲೆಗಳಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 551 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು. ಪ.ಜಾತಿ, ಪ.ಪಂಗಡ ಮತ್ತು ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿ ಪಾಸಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಅರ್ಜಿಯೊಂದಿಗೆ ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ, ಜನನ ಪ್ರಮಾಣ ಪತ್ರ ಹಾಗೂ ಜನ್ಮದಿನಾಂಕವಿರುವ ಎಸೆಸೆಲ್ಸಿ, ತಹಶೀಲ್ದಾರರು ಹಾಗೂ ಉಪ ತಹಶೀಲ್ದಾರರಿಂದ ಪಡೆದ ಒಂದು ವರ್ಷದೊಳಗಿನ ವಾಸಸ್ಥಳದ ದೃಢೀಕರಣ, ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News