ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಇಬ್ಬರ ಬಂಧನ

Update: 2020-01-29 11:53 GMT

ಬೆಂಗಳೂರು, ಜ.29: ಹೆಚ್ಚಿನ ವೇತನದ ಉದ್ಯೋಗ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಯುವತಿಯರನ್ನು ರಕ್ಷಿಸಿದ್ದಾರೆ.

ಸುಬ್ರಮಣ್ಯ ನಗರದ ಸುಬೇಂದ್ರ ದೇಬನಾಥ್ ಹಾಗೂ ಪ್ರಜ್ವಲ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 3,500 ರೂ. ನಗದು, ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News