ಫೆ.1-2: ಮಲ್ಪೆ ಬೀಚ್ ಉತ್ಸವ

Update: 2020-01-29 15:16 GMT

ಉಡುಪಿ, ಜ.29: ಜಿಲ್ಲಾಡಳಿತ ಉಡುಪಿ, ಮಲ್ಪೆಅಭಿವೃದ್ಧಿ ಸಮಿತಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಪಶುಪಾಲನಾ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ ಮಂದಿರಗಳ ಸಹಯೋಗದೊಂದಿಗೆ ಮಲ್ಪೆ ಬೀಚ್ ಉತ್ಸವ ಫೆ.1 ಮತ್ತು 2 ರಂದು ಮಲ್ಪೆಬೀಚ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಫೆ.1ರ ಶನಿವಾರ ಸಂಜೆ 5:30ಕ್ಕೆ ರಾಜ್ಯ ಗೃಹ ಮತ್ತು ಸಹಕಾರ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ದಲ್ಲಿ ಉಪಸ್ಥಿತರಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News