ಉಡುಪಿ: ಜ.30ರಂದು ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Update: 2020-01-29 15:22 GMT

ಉಡುಪಿ, ಜ.29: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ಜಿಲ್ಲೆ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೇರಿಸಿ, ಅಂತರ್ಜಾಲದ ಕ್ಲೌಡ್ ತಂತ್ರಜ್ಞಾನ ದ ಮೂಲಕ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ನಾಳೆ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆಯನ್ನು ನೀಡಲಾಗುವುದು.

ಉಡುಪಿ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಜ.30 ರಂದು ಬೆಳಗ್ಗೆ 9:30ಕ್ಕೆ ಉಡುಪಿ ನಗರಸಭೆ ಪಕ್ಕದಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ, ಭಾರತ ಸಂವಿಧಾನ ದಿನಾಚರಣೆ ಹಾಗೂ ಡಿಜಿಟಲ್ ಗ್ರಂಥಾಲಯ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಸಕಾಲ ಮತ್ತು ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಗೃಹ ಮತ್ತು ಸಹಕಾರ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಬಾ ಕರಂದ್ಲಾಜೆ ಪಾಲ್ಗೊಳ್ಳಲಿದ್ದಾರೆ.

ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಉಡುಪಿ ತಾಲೂಕು ಘಟಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಜಗದೀಶ್, ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಬೆಂಗಳೂರು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಮತ್ತು ಉಡುಪಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ. ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News