ಪೆರಿಯಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ನಟ ರಜನಿಕಾಂತ್ ಕ್ಷಮೆಯಾಚನೆಗೆ ಆಗ್ರಹಿಸಿ ಧರಣಿ

Update: 2020-01-29 16:40 GMT

ಬೆಂಗಳೂರು, ಜ. 29: ವಿಚಾರವಾದಿ ಪೆರಿಯಾರ್ ರಾಮಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ರಜನಿಕಾಂತ್ ಕೂಡಲೇ ಬಹಿರಂಗ ಕ್ಷಮೆ ಕೋರಬೇಕು. ಇಲ್ಲವಾದರೆ ಅವರ ಸಿನಿಮಾಗಳ ಬಿಡುಗಡೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ವಿವಿಧ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಬುಧವಾರ ಇಲ್ಲಿನ ಪುರಭವನದ ಮುಂಭಾಗದಲ್ಲಿ ದ್ರಾವಿಡ ವಿಡುದಲೈ ಕಳಗಂ, ವಿಡುದಲೈ ಚಿರುತೆಗಳ್, ಕರ್ನಾಟಕ ತಮಿಳ್ ಮಕ್ಕಳ ಇಯಕ್ಕುಂ, ಫ್ಯಾಶಿಸ್ಟ್ ವಿರೋಧಿ ಒಕ್ಕೂಟ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ನಟ ರಜನಿಕಾಂತ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ನಟ ರಜನಿಕಾಂತ್ ಅವರು ಪೆರಿಯಾರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕೆಗಳಲ್ಲಿ ಬಂದಿದೆ ಎಂದೂ ಸುಳ್ಳು ಹೇಳಿದ್ದಾರೆ. ಅಲ್ಲದೆ, ಕೋರ್ಟ್‌ಗೂ ಉತ್ತರ ನೀಡದೆ ಸುಖಾ ಸುಮ್ಮನೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಪೆರಿಯರ್ ಅವರ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲದ ನಟ ರಜನಿಕಾಂತ್, ಮನಸೋ ಇಚ್ಛೆ ಹೇಳಿಕೆ ನೀಡಿದ್ದು ಅಕ್ಷಮ್ಯ. ಕೂಡಲೇ ಸಾರ್ವಜನಿಕ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಅವರ ಸಿನಿಮಾಗಳ ಬಿಡುಗಡೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ವಕೀಲ ಬಾಲನ್, ರಾವಣ, ಎಂ.ಎಸ್.ಶೇಖರ್, ಷಣ್ಮುಗಂ, ರಾಜನ್, ಜಗದೀಶ್, ಚೌರಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News