ಜ.31: ಪತ್ರಕರ್ತರ ರಾಜ್ಯ ಸಮ್ಮೇಳನದ ವೆಬ್‌ಸೈಟ್ ಅನಾವರಣ

Update: 2020-01-29 17:37 GMT

ಮಂಗಳೂರು, ಜ.29: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಮಾ.7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್‌ಸೈಟ್ ಅನಾವರಣವು ಜ.31ರಂದು ಬೆಳಗ್ಗೆ 10ಕ್ಕೆ ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ವೆಬ್‌ಸೈಟ್’ ಅನಾವರಣಗೊಳಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ.ಖಾದರ್, ಡಿ.ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ ವೈ, ಐವನ್ ಡಿಸೋಜ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ , ಮಂಗಳೂರು ಪೊಲೀಸ್ ಆಯುಕ್ತ ಡಾ .ಪಿ ಎಸ್. ಹರ್ಷ, ದ.ಕ.ಜಿಪಂ ಸಿಇಒ ಡಾ. ಆರ್. ಸೆಲ್ವಮಣಿ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ,ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News