ಅಪಘಾತಗಳ ನಿಯಂತ್ರಣಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2020-01-29 17:43 GMT

ಮಂಗಳೂರು, ಜ.29: ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅಪಘಾತಗಳನ್ನು ತಡೆಗಟ್ಟಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ ನೀಡಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟುವ ಸಲುವಾಗಿ ಅಧಿಕಾರಿಗಳು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಹಾಗೆಯೇ ರಸ್ತೆ ಸುರಕ್ಷತಾ ಕ್ರಮಕ್ಕೆ ಸಂಬಂಧಿಸಿದಂತೆ ಜಾಹೀರಾತುಗಳನ್ನು ಅಳವಡಿಸಬೇಕು. ನಗರದ ಕೆಲವೊಂದು ಭಾಗದಲ್ಲಿ ಸಿಗ್ನಲ್ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ. ಅಂತಹ ಸಿಗ್ನಲ್ಗಳನ್ನು ದುರಸ್ತಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News