ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಭಾಷಣ: ಡಾ. ಕಫೀಲ್ ಖಾನ್ ಬಂಧನ

Update: 2020-01-30 07:10 GMT

ಹೊಸದಿಲ್ಲಿ, ಜ.30: ಕಳೆದ ತಿಂಗಳು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು)  ಪೌರತ್ವ ತಿದ್ದುಪಡಿ ಕಾಯ್ದೆಗೆ  ಸಂಬಂಧಿಸಿ    ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ  ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

2017 ರಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ,ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿ ಬಳಿಕ ಹೊರ ಬಂಧಿದ್ದ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಅವರನ್ನು ಬುಧವಾರ ತಡರಾತ್ರಿ ಮುಂಬೈನಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪೌರತ್ವ  ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ.

ಡಿಸೆಂಬರ್‌ನಲ್ಲಿ ಅವರ ವಿರುದ್ಧ  ಎಫ್‌ಐಆರ್  ದಾಖಲಾದ ನಂತರ ಡಾ. ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಾಗ ಡಾ. ಖಾನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಂಬೈ ಪೊಲೀಸರ ಸಹಾಯದಿಂದ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಯೊಂದಕ್ಕೆ  ಮಾಹಿತಿ ನೀಡಿದ್ದಾರೆ.  ಅವರ ವಿರುದ್ಧ ಐಪಿಸಿಯ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ  ಎಫ್ ಐಆರ್ ದಾಖಲಾಗಿತ್ತು.

, ದೂರು ದಾಖಲಾಗಿ ಸುಮಾರು 40 ದಿನಗಳ ನಂತರ ಯುಪಿ ಪೊಲೀಸರ ವಿಶೇಷ ಕಾರ್ಯಪಡೆ ಡಾ. ಖಾನ್ ಅವರನ್ನು ಯಾಕೆ  ಬಂಧಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

ಇಂದು ಮುಂಬೈನಲ್ಲಿ  ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಡಾ.ಕಫೀಲ್ ಖಾನ್   ಭಾಗವಹಿಸಲು ತೆರಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News