ಬಂಡಾಯದ ಪ್ರಶ್ನೆಯೇ ಇಲ್ಲ: ಡಿಸಿಎಂ ಸ್ಥಾನ ವಿಚಾರದಲ್ಲಿ ಸಚಿವ ಶ್ರೀರಾಮುಲು

Update: 2020-01-30 15:50 GMT

ಕಲಬುರಗಿ, ಜ.30: ಉಪಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಯಾವುದೇ ಕಾರಣಕ್ಕೂ ಬಂಡಾಯದ ಪ್ರಶ್ನೆಯೇ ಇಲ್ಲವೆಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯ ಹಾಗೂ ಸಮುದಾಯದ ಮಠಾಧೀಶರು ನಾನು ಉಪಮುಖ್ಯಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ. ಆದರೆ, ನಾನು ಪಕ್ಷದ ನಿರ್ಧಾರವನ್ನು ಪಾಲಿಸುತ್ತೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲವೆಂದು ತಿಳಿಸಿದರು.

ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವ ಬೇಡಿಕೆ ಬಹುಕಾಲದಿಂದ ಬಾಕಿ ಇದೆ. ಈ ವಿಷಯವನ್ನು ಅಧ್ಯಯನ ಮಾಡುವ ಕಾರ್ಯವನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಗೆ ವಹಿಸಲಾಗಿದೆ. ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ನಂತರ, ಸಚಿವ ಸಂಪುಟದಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಅವರು ಹೇಳಿದರು.

ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡಲು ರಾಜ್ಯದಲ್ಲಿ 63 ವಿಶೇಷ ಮದರ್-ಬೇಬಿ ಆಸ್ಪತ್ರೆಗಳನ್ನು ತೆರೆಯಲು ಸರಕಾರ ನಿರ್ಧರಿಸಿದೆ. ಜನರಿಗೆ ತಕ್ಷಣ ವೈದ್ಯಕೀಯ ನೆರವು ಪಡೆಯಲು ಸಹಾಯ ಮಾಡಲು, ಕೆಪಿಎಸ್ಸಿನಿಂದ ನೇರವಾಗಿ ವೈದ್ಯರನ್ನು ನೇಮಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಶೀಘ್ರದಲ್ಲೇ ಸುಮಾರು 2000 ವೈದ್ಯರನ್ನು ನೇಮಿಸಲಾಗುವುದು.

-ಶ್ರೀರಾಮುಲು, ಆರೋಗ್ಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News