ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, 11 ಮಂದಿಗೆ ಗಾಯ

Update: 2020-01-30 16:11 GMT

ಹಾಸನ, ಜ.30: ಸಾರಿಗೆ ಬಸ್ ಸೇರಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅರಸೀಕೆರೆ ತಾಲೂಕು ಸೂಳೆಕೆರೆ ಬಳಿ ಇಂದು ಮದ್ಯಾಹ್ನ ನಡೆದಿದೆ.

ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಘಟನೆ ನಡೆದಿದ್ದು, ಸಾರಿಗೆ ಬಸ್ ಹಾಗೂ ಟಾಟಾ ಮ್ಯಾಜಿಕ್, ಗೂಡ್ಸ್ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಬಸವರಾಜು (48) ಯಲ್ಲಯ್ಯ (50) ರಮೇಶ್ (24) ಮೃತರು. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News