ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2020-01-30 17:59 GMT

ಉಡುಪಿ, ಜ.30: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿ ಯರ ಸಾಮಾನ್ಯ, ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಭವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‌ಲೈನ್ ವುೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2019-20ನೇ ಸಾಲಿನಲ್ಲಿ ಜಿಲ್ಲೆಯ ಕೆಲವೊಂದು ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲ ಹೆಚ್ಚಳದಿಂದ ಉದ್ಭವವಾಗಿರುವ ಸ್ಥಾನಗಳಿಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಿ ಸಂಖ್ಯಾಬಲ ಹೆಚ್ಚಳದಿಂದ ಉದ್ಭವವಾಗಿರುವ ಸ್ಥಾನಗಳ ಬಗ್ಗೆ ವಿದ್ಯಾರ್ಥಿ ನಿಲಯಗಳ ಮಾಹಿತಿ ಪಡೆದು ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಳ ಲಾಗಿನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

2019-20ನೇ ಸಾಲಿನಲ್ಲಿ ಜಿಲ್ಲೆಯ ಕೆಲವೊಂದು ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲ ಹೆಚ್ಚಳದಿಂದ ಉದ್ಭವವಾಗಿರುವ ಸ್ಥಾನಗಳಿಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಿ ಸಂಖ್ಯಾಬಲ ಹೆಚ್ಚಳದಿಂದ ಉದ್ಭವವಾಗಿರುವ ಸ್ಥಾನಗಳ ಬಗ್ಗೆ ವಿದ್ಯಾರ್ಥಿ ನಿಲಯಗಳ ಮಾಹಿತಿ ಪಡೆದು ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಲಾಗಿನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ. ಸಂಖ್ಯಾ ಬಲ ಹೆಚ್ಚಿಸಲಾಗಿರುವ ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.backwardclasses.kar.nic.in ಅನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050370006, 8050770009 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News