ಪಿಎಂಇಜಿಪಿ/ಸಿಎಂಇಜಿಪಿ ಯೋಜನೆಯಡಿ ವಂಚನೆ: ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ
Update: 2020-01-31 00:04 IST
ಮಂಗಳೂರು, ಜ.30: ದ.ಕ.ಜಿಲ್ಲೆಯಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿದೆ.
ವ್ಯಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹವರಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಅಲ್ಲದೆ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ /ಏಜೆಂಟ್‌ಗಳನ್ನು ನೇಮಿಸಿಲ್ಲ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.