ಕೇಂದ್ರ ಬಜೆಟ್ ಅಧಿವೇಶನ ಆರಂಭ, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಹೊಸದಿಲ್ಲಿ, ಜ.31: ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದರು.
ಪ್ರಸಕ್ತ ಕಲಾಪದಲ್ಲಿ ಆರ್ಥಿಕ ವಿಚಾರಗಳ ಬಗ್ಗೆ ವಿಸ್ತ್ರತ ಚರ್ಚೆ ನಡೆಯಲಿದೆ. ಸುಗಮ ಕಲಾಪಕ್ಕೆ ಅವಕಾಶ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
‘‘ರಾಷ್ಟ್ರದ ಜನತೆಗೆ ಹೊಸ ವರ್ಷದ ಶುಭಾಶಯಗಳು. 2020 ಭಾರತಕ್ಕೆ ಅತ್ಯಂತ ಪ್ರಮುಖ ವರ್ಷವಾಗಲಿದೆ. ಭಾರತದ ಸಂವಿಧಾನ ದೇಶದ ಅಭಿವೃದ್ಧಿ, ಆಕಾಂಕ್ಷೆ ಈಡೇರಿಸಲು ನಮಗೆಲ್ಲರೂ ಮಾರ್ಗದರ್ಶಕವಾಗಿದೆ. ನಮ್ಮ ಸರಕಾರ ತ್ರಿವಳಿ ತಲಾಖ್‌ನ್ನು ನಿಷೇಧಿಸಿದೆ. ಮುಸ್ಲಿಂ ಮಹಿಳೆಯರ ಸುರಕ್ಷತೆಗೆ ತ್ರಿವಳಿ ತಲಾಖ್ ನಿಷೇಧಿಸಲಾಗಿದೆ. ಚಿಟ್ ಫಂಡ್ ವಂಚನೆ ತಪ್ಪಿಸಲು ಕಾಯ್ದೆ, ರಾಮಜನ್ಮಭೂಮಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ತೀರ್ಪು ಸ್ವಾಗತಾರ್ಹವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಪೌರತ್ವ ಕಾಯ್ದೆ ಸೇರಿದಂತೆ ಹಲವು ಐತಿಹಾಸಿಕ ಕಾಯ್ದೆ ಜಾರಿಗೆ ತರಲಾಗಿದೆ. ಉದ್ಯಮ ಸರಳೀಕರಣ ರ್ಯಾಂಕಿಂಗ್‌ನಲ್ಲಿ ಏರಿಕೆಯಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರಕಾರದ ಉದ್ದೇಶ. ನಮ್ಮ ಸರಕಾರ ಎಲ್ಲ ಧರ್ಮದವರಿಗೆ ಆದ್ಯತೆ ನೀಡುತ್ತಿದೆ'' ಎಂದು ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಹೇಳಿದ್ದಾರೆ.