ನಿರ್ಭಯಾ ಪ್ರಕರಣ: ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಆರೋಪಿ ಪವನ ಗುಪ್ತಾ
ಹೊಸದಿಲ್ಲಿ, ಜ.31: ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಆರೋಪಿಗಳ ಪೈಕಿ ಒಬ್ಬನಾಗಿರುವ ಪವನ್ ಗುಪ್ತಾ ಶುಕ್ರವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾನೆ.
ತಾನು ಅಪರಾಧ ಎಸೆಗಿದ ಸಮಯದಲ್ಲಿ ಅಪ್ರಾಪ್ತನಾಗಿದ್ದೆ ಎಂದು ಹೇಳಿರುವ ಅರ್ಜಿಯನ್ನು ತಿರಸ್ಕರಿಸಿದ ತೀರ್ಪನ್ನ್ನು ಪರಾಮರ್ಶಿಸುವಂತೆ ಕೋರಿ ಗುಪ್ತಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ.
ನಿರ್ಭಯಾ ಪ್ರಕರಣದ ವೇಳೆ ತಾನು ಅಪ್ತಾಪ್ತನಾಗಿದ್ದೆ ಎಂಬ ಪವನ್ ವಾದವನ್ನು ದಿಲ್ಲಿಯ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಪವನ್ ಈ ಹಿಂದೆಯೂ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ. ಜನವರಿ 20ರ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಪವನ್ ಅರ್ಜಿಯನ್ನು ತಿರಸ್ಕರಿಸಿತ್ತು.
ಅಡ್ವಕೇಟ್ ಎ.ಪಿ.ಸಿಂಗ್ ಪ್ರಕರಣದಲ್ಲಿ ಪವನ್‌ರನ್ನು ಪ್ರತಿನಿಧಿಸುತ್ತಿದ್ದಾರೆ. ಜನವರಿ 20ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಪರಾಮರ್ಶಿಸುವಂತೆ ಕೋರಿ ಶುಕ್ರವಾರ ಪವನ್ ಪರ ಅರ್ಜಿ ಸಲ್ಲಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.