×
Ad

ಮಂಗನ ಕಾಯಿಲೆ ಹರಡದಂತೆ ಎಚ್ಚರವಹಿಸಿ: ಜಿ.ಜಗದೀಶ್

Update: 2020-01-31 21:16 IST

ಉಡುಪಿ, ಜ.31: ಪಕ್ಕದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಆರೋಗ್ಯ ಇಲಾಖೆಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನತೆಗೆ ಮಂಗನ ಕಾಯಿಲೆ ಬಗ್ಗೆ ಸೂಕ್ತ ಅರಿವು ಮೂಡಿಸುವಂತೆ ಹಾಗೂ ಅಗತ್ಯವಾಗಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಸತ್ತ ಮಂಗಗಳನ್ನು ಗುರುತಿಸಿ, ಸೂಕ್ತ ರೀತಿಯಲ್ಲಿ ಪರೀಕ್ಷಿಸು ವಂತೆ ಸೂಚಿಸಿದರು.

ರೋಗ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲೆಯಾದ್ಯಂತ ಅರಣ್ಯದಂಚಿನ ಗ್ರಾಮಸ್ಥರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪೋಸ್ಟರ್‌ಗಳನ್ನು ಮುದ್ರಿಸಿ ವಿತರಿಸುವಂತೆ ಹಾಗೂ ಗ್ರಾಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡಾ, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ ರಾಮ, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಉಪಸ್ಥಿತರಿದ್ದರು.

ವಾಹಕನಿಯಂತ್ರಣಾಧಿಕಾರಿಡಾ.ಪ್ರಶಾಂತ್‌ಟ್, ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ ರಾಮ, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News