×
Ad

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ 'ಕೊರೋನಾ ವೈರಸ್ ಹೆಲ್ಪ್ ಡೆಸ್ಕ್' ಸ್ಥಾಪನೆ

Update: 2020-01-31 21:31 IST

ಬೆಂಗಳೂರು, ಜ.31: ಚೀನಾದಲ್ಲಿ ಇತ್ತೀಚೆಗೆ ಕಂಡುಬಂದಿರುವ ಕೊರೋನಾ ವೈರಸ್ ಭಾರತಕ್ಕೆ ಹರಡದಂತೆ ತಡೆಯಲು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರದಲ್ಲಿ ಕರೋನಾ ವೈರಸ್ ಹೆಲ್ಪ್ ಡೆಸ್ಕ್ ಸ್ಥಾಪಿಸಲಾಗಿದೆ.

ಈ ಕೊರೋನಾ ವೈರಸ್ ಹೆಲ್ಪ್ ಡೆಸ್ಕ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಶುಕ್ರವಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News