ಕ್ರಿಕೆಟ್ ಬೆಟ್ಟಿಂಗ್ ದಂಧೆ: ಆರೋಪಿ ಬಂಧನ

Update: 2020-01-31 16:09 GMT

ಬೆಂಗಳೂರು, ಜ. 31: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಆರೋಪಿಯಿಂದ 1.80 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಪ್ರಮೋದ್ ಅಲಿಯಾಸ್ ಪ್ರಕಾಶ್ ಎಂಬುವವರಾಗಿದ್ದು, ಈತ ಕೆ.ಪಿ.ಅಗ್ರಹಾರದ 1 ನೇ ಕ್ರಾಸ್‌ನ ನಿವಾಸಿ ಎನ್ನಲಾಗಿದೆ. ಇಲ್ಲಿನ ಸುರೇಶ್ ಜ್ಯುವೆಲರಿ ಶಾಪ್ ಮುಂಭಾಗದ ಜಟಕಾ ಸ್ಟಾಂಡ್ ಬಳಿ ಭಾರತ ಹಾಗೂ ನ್ಯೂಜಿಲ್ಯಾಂಡ್ ಕ್ರಿಕೆಟ್ ಪಂದ್ಯದ ಮೇಲೆ ಬೆಟ್ಟಿಂಗ್ ಆಡುತ್ತಿದ್ದ. ಸೋತಿರುವ ಪಂಟರ್‌ಗಳಿಂದ ಹಣ ಸಂಗ್ರಹಣೆ ಮಾಡುತ್ತಿದ್ದ ಎನ್ನಲಾಗಿದೆ.

ಸಿಸಿಬಿ ಪೊಲೀಸರು ಖಚಿತ ಮಾಹಿತಿಯಾಧರಿಸಿ ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಇದಕ್ಕೂ ಮೊದಲು ಅನೇಕ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯಿಂದ ನಗದು ಮತ್ತು ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News