ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

Update: 2020-01-31 16:50 GMT

ಬೆಂಗಳೂರು, ಜ.31: ಹಾಸನ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಸಂಸದ ಪ್ರಜ್ವಲ್ ರೇವಣ್ಣ ನಿರಾಳರಾಗಿದ್ದಾರೆ.

ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಜಾಗೊಳಿಸಿದೆ. ಈ ಅರ್ಜಿಯು ಜನತಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 81(3) ವಿರುದ್ಧವಾಗಿದೆ ಎಂದು ಹೇಳಿದೆ. ಅರ್ಜಿಯಲ್ಲಿ ಹಲವಾರು ಲೋಪದೋಷಗಳಿವೆ ಎಂದು ಹೈಕೋರ್ಟ್ ಮಾಹಿತಿ ನೀಡಿತ್ತು. ಆದರೆ ಆಕ್ಷೇಪಣೆಯನ್ನು ಸರಿಪಡಿಸಲು ವಿಳಂಬ ತೋರಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಪ್ರಜ್ವಲ್ ರೇವಣ್ಣ ಆಯ್ಕೆ ಕುರಿತು ಎ.ಮಂಜು ಸಹ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೂಡ ಹೈಕೋರ್ಟ್ ವಜಾಗೊಳಿಸಿತ್ತು. ಕಳೆದ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ ಅರೋಪವನ್ನು ಪ್ರಜ್ವಲ್ ರೇವಣ್ಣ ಮೇಲೆ ಎ.ಮಂಜು ಹೊರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News