7ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ನಲ್ಲಿ ಸಾಮಾನ್ಯ ಮೌಲ್ಯಾಂಕನಕ್ಕೆ ಚಿಂತನೆ

Update: 2020-01-31 17:32 GMT

ಬೆಂಗಳೂರು, ಜ.31: ರಾಜ್ಯದ ಎಲ್ಲ ಸರಕಾರಿ, ಅನುದಾನ ರಹಿತ ಶಾಲೆಗಳ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ ಎರಡನೆ ವಾರದಲ್ಲಿ ಸಾಮಾನ್ಯ ಮೌಲ್ಯಾಂಕನ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಈ ಸಮೀಕ್ಷೆಯನ್ನು ಸ್ಟುಡೆಂಟ್ ಅಚೀವ್‌ಮೆಂಟ್ ಟ್ರಾಕಿಂಗ್ ಸಿಸ್ಟಮ್‌ನಲ್ಲಿ ನಮೂದಿಸಲಾಗಿರುವ ವಿದ್ಯಾರ್ಥಿಗಳ ಮಾಹಿತಿಗೆ ಅನುಗುಣವಾಗಿ ನಡೆಸಲಾಗುತ್ತಿರುವುದರಿಂದ ಎಲ್ಲ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್ ಮಾಡಲು ಆಯಾ ಶಾಲಾ ಮುಖ್ಯ ಶಿಕ್ಷಕರು, ಎಲ್ಲ ಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶಾಲೆಯ ಮಾಧ್ಯಮ, ಭಾಷಾ ಸಂಯೋಜನೆ, ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಸ್ಟೂಡೆಂಟ್ ಅಚೀವ್‌ಮೆಂಟ್ ಟ್ರಾಕಿಂಗ್ ಸಿಸ್ಟಮ್‌ನಲ್ಲಿ ನೀಡಲಾಗಿರುವ ಇನ್ನಿತರ ವಿವರಗಳನ್ನು ಫೆ.5 ರೊಳಗೆ ಕಡ್ಡಾಯವಾಗಿ ಅಪ್‌ಡೇಟ್ ಮಾಡಬೇಕಾಗಿದೆ. ಈ ಸಿಸ್ಟಮ್‌ನಲ್ಲಿರುವ ಮಾಹಿತಿ ಆಧರಿಸಿಯೇ ಪ್ರಶ್ನೋತ್ತರ ಪತ್ರಿಕೆ ಮುದ್ರಿಸಿ ಪೂರೈಕೆ ಮಾಡಲಾಗುವುದು. ಹೀಗಾಗಿ, ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಿಗೆ ಸೂಕ್ತ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News