ನ್ಯಾಯಾಂಗ ಬಂಧನದಲ್ಲಿರುವ ಡಾ.ಕಫೀಲ್ ಖಾನ್ ಮಥುರಾ ಜೈಲಿಗೆ

Update: 2020-02-01 10:23 GMT

ಹೊಸದಿಲ್ಲಿ: ಮೂರು ದಿನಗಳ ಹಿಂದೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿತರಾದ ಮಕ್ಕಳ ತಜ್ಞ ಡಾ.ಕಫೀಲ್ ಖಾನ್ ಅವರನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮಥುರಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ಖಾನ್ ಅವರನ್ನು ಶುಕ್ರವಾರ ಸಂಜೆ ಅಲೀಗಢಕ್ಕೆ ಕರೆತಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವೃತ್ತ ಅಧಿಕಾರಿ (ಸಿವಿಲ್ ಲೈಸ್ಸ್) ಅನಿಲ್ ಸಾಮಾನಿಯಾ ಹೇಳಿದ್ದಾರೆ.

ಎಎಂಯುನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಫೀಲ್ ಖಾನ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇತರ ಸಮುದಾಯಗಳ ವಿರುದ್ಧ ಖಾನ್ ದ್ವೇಷದ ಬೀಜ ಬಿತ್ತುತ್ತಿದ್ದಾರೆ. ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ಕದಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಎಫ್‍ಐಆರ್ ನಲ್ಲಿ ಆರೋಪಿಸಿದ್ದಾರೆ. ಎಎಂಯು ವಿವಿಯಲ್ಲಿ ಡಿಸೆಂಬರ್ 12ರಂದು ಸಂಜೆ 6:30ಕ್ಕೆ 600 ಮುಸ್ಲಿಂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಲಾಗಿದೆ.

ಮೊದಲು ಅವರನ್ನು ಅಲೀಗಢ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಬಳಿಕ ಮಥುರಾ ಜೈಲಿಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News