×
Ad

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಉಗ್ರ ಆದಿತ್ಯ ರಾವ್‌ಗೆ ನ್ಯಾಯಾಂಗ ಬಂಧನ

Update: 2020-02-01 16:49 IST

ಮಂಗಳೂರು, ಫೆ.1: ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕವಿರಿಸಿದ ಪ್ರಕರಣದ ಶಂಕಿತ ಉಗ್ರ ಆದಿತ್ಯ ರಾವ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಗರದ 6ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶನಿವಾರ ಶಂಕಿತ ಉಗ್ರನನ್ನು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಶಂಕಿತ ಉಗ್ರ ಆದಿತ್ಯ ರಾವ್ ಜ. 20ರಂದು ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕವಿರಿಸಿ, ಜ.22ರಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ. ನಂತರ ಮಂಗಳೂರು ಉತ್ತರ ವಲಯ ಎಸಿಪಿ ನೇತೃತ್ವದ ತನಿಖಾ ತಂಡವು ಆದಿತ್ಯ ರಾವ್‌ನನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿತ್ತು. ಅಲ್ಲದೆ ಜ.23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚುವರಿ ವಿಚಾರಣೆಗಾಗಿ 10 ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿತ್ತು. ಆ ಬಳಿಕ ಪೊಲೀಸರು ಸ್ಥಳ ಮಹಜರು ನಡೆಸಿ, ಸಾಕ್ಷ್ಯ ಸಂಗ್ರಹಿಸಿದ್ದರು. ಇದೀಗ ಫೆ.1ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ವಾರಗಳ ನ್ಯಾಯಾಂಗ ಸೆರೆ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News