ಕ್ರಿಕೆಟ್ ಬೆಟ್ಟಿಂಗ್ ಆರೋಪ: 10 ಮಂದಿ ಸೆರೆ

Update: 2020-02-01 14:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.1: ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ 10 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ನಡೆದ ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆದ ನಾಲ್ಕನೆ ಟಿ-ಟ್ವೆಂಟಿ ಪಂದ್ಯದ ಸೋಲು-ಗೆಲುವಿನ ಬಗ್ಗೆ ಇವರು ಜೂಜಾಟ ನಡೆಸುತ್ತಿದ್ದರು ಎನ್ನಲಾಗಿದೆ

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ವಿಶೇಷ ವಿಚಾರಣಾದಳ ವಿಭಾಗದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 87,200 ನಗದು ಹಾಗೂ 10 ಮೊಬೈಲ್‌ಗಳನ್ನು ಜಪ್ತಿ ಮಾಡಿ, ಇಲ್ಲಿನ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News