ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನವನ್ನು ಒಟ್ಟಾಗಿ ಸ್ವಾಗತಿಸುತ್ತೇವೆ: ಕೋಟ
ಉಡುಪಿ, ಫೆ.1: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ನಾಯಕರ ಜೊತೆ ಚರ್ಚಿಸಿ ತೆಗೆದುಕೊಳ್ಳುವ ತೀರ್ಮಾನವನ್ನು ನಾವೆಲ್ಲಾ ಒಟ್ಟಾಗಿ, ಒಂದಾಗಿ ಸ್ವಾಗತ ಮಾಡುತ್ತೇವೆ. ಸುಭದ್ರ ಸರಕಾರ ಒಂದೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡುತಿದ್ದರು. ಸೋತವರಿಗೆ ಸ್ಥಾನಮಾನ ಕೊಡುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿ ಸಿದ ಸಚಿವರು, ಈ ವಿಚಾರದಲ್ಲಿ ಶ್ರೀನಿವಾಸ ಪೂಜಾರಿ ಯಾವುದೇ ನಿರ್ಧಾರ ತೆಗೆದು ಕೊಳ್ಳಲು ಸಾಧ್ಯವಿಲ್ಲ. ಆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್, ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಪರಿಹರಿಲಿದ್ದಾರೆ ಎಂಬ ವಿಶ್ವಾಸ ಇದೆ ಎಂದರು.
ನಾನು ಮಂತ್ರಿಯಾಗಿ ಜನರ ಹಾಗೂ ಇಲಾಖೆಯ ಕೆಲಸಗಳನ್ನು ಮತ್ತು ಸಮಾಜದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಅತ್ಯಂತ ಶೃದ್ದೆ ಯಿಂದ ಕೆಲಸ ವನ್ನು ನಿರ್ವಹಿಸಿದ್ದೇನೆ ಎಂದ ಅವರು, ಒಂದಿಷ್ಟು ಖಾತೆಗಳನ್ನು ಪಕ್ಷಕ್ಕೆ ಬರುವವ ರಿಗೆ ಎಂದು ಮುಖ್ಯಮಂತ್ರಿ ಮೀಸಲಿರಿಸಿದ್ದರು. ಈಗ ಅದರ ಪ್ರಕ್ರಿಯೆಗಳು ಆರಂಭವಾಗಿದೆ. ಹಾಗಾಗಿ ಸರಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಜವಾಬ್ದಾರಿಯುತವಾಗಿ ಎಲ್ಲರೂ ಮೆಚ್ಚುವಂತಹ ಕೆಲಸ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ ಎಂದು ತಿಳಿಸಿದರು.