ಮೈಸೂರು ವಿಭಾಗ ಮಟ್ಟದ ಯುವಜನ ಮೇಳ
Update: 2020-02-01 20:43 IST
ಉಡುಪಿ, ಫೆ.1: ಚಾಮರಾಜನಗರದಲ್ಲಿ ಫೆ.7ರಿಂದ 9ರವರೆಗೆ ನಡೆಯಲಿ ರುವ ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನ ಮೇಳದ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಭಾಗವಹಿಸಲು ಅರ್ಹರಾಗಿದ್ದಾರೆ.
ಭಾಗವಹಿಸುವ ಸ್ಪರ್ಧಿಗಳು ಫೆ.7ರಂದು ಮಧ್ಯಾಹ್ನ 1 ಗಂಟೆಯ ಒಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ(0820-2521324) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.