×
Ad

85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 11 ಕೋಟಿ ರೂ. ಅನುದಾನ ಬಿಡುಗಡೆ

Update: 2020-02-01 22:34 IST

ಬೆಂಗಳೂರು ಫೆ.1: ಕಲಬುರಗಿಯಲ್ಲಿ ಫೆ. 5ರಿಂದ 7 ರವರೆಗೆ ಜರುಗಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆಗಾಗಿ ಒಟ್ಟಾರೆ 11 ಕೋಟಿ ರೂ. ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿದೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ರಿಯಾ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವಂತೆ 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 

ಸಾಹಿತ್ಯ ಸಮ್ಮೇಳನದ ಆಯೋಜನೆಗಾಗಿ ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನವನ್ನು ಕಲಬುರಗಿ ಜಿಲ್ಲಾಧಿಕಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬಿಡುಗಡೆ ಮಾಡಲಾಗಿದೆ. ಈ ಸಮ್ಮೇಳನಕ್ಕೆ ಒಟ್ಟು 11 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News